Ration Card Update: 4 ಚಕ್ರದ ವಾಹನ ಇದ್ರೂ ರದ್ದಾಗಲ್ವಾ BPL ಕಾರ್ಡ್; ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ ಕೆ. ಹೆಚ್ ಮುನಿಯಪ್ಪ!

Ration Card Update: ಯಾರ ಬಳಿ ಬಿಪಿಎಲ್ ಕಾರ್ಡ್ ಇದೆಯೋ ಅವೆಲ್ಲವೂ ಹೆಚ್ಚು ಕಡಿಮೆ ರದ್ದಾಗುತ್ತದೆ ಅದರಲ್ಲೂ ನಾಲ್ಕು ಚಕ್ರದ ವಾಹನ ಇರುವ ಬಿಪಿಎಲ್ ಕಾರ್ಡ್ (BPL Card) ರದ್ದು ಪಡಿಸಲಾಗುತ್ತದೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ (K.H. Muniyappa) ರಾಜ್ಯದ ಜನತೆಗೆ ಗುಡ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ.

ನಾವು ಯಾವುದೇ ಬಿಪಿಎಲ್ ಕಾರ್ಡ್ ರದ್ದು ಪಡಿಸುವುದಿಲ್ಲ ಬಿಜೆಪಿ ಸರ್ಕಾರ (BJP Government) ಅಧಿಕಾರದಲ್ಲಿ ಇರುವಾಗ 5 ಲಕ್ಷ ಜನರ ಅರ್ಜಿ ಸಲ್ಲಿಕೆಯಾಗಿತ್ತು. ಚುನಾವಣೆಯ ಕಾರಣದಿಂದಾಗಿ, ಕಾರ್ಡ್ ವಿತರಣೆ ಮಾಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ (Congress Government) ಹೊಸ ಪಡಿತರ ಚೀಟಿಯನ್ನು ವಿತರಣೆ ಮಾಡುವುದಕ್ಕೆ ಈಗಲೂ ಅವಕಾಶ ಮಾಡಿಕೊಡುತ್ತಿಲ್ಲ ಸದ್ಯ ಹೊಸ ಪಡಿತರ ಚೀಟಿ (ration card) ವಿತರಣೆ ಮಾಡುವುದಿಲ್ಲ ಎಂದು ಮುನಿಯಪ್ಪ ಅವರು ತಿಳಿಸಿದ್ದಾರೆ ಇದಕ್ಕೆ ಕಾರಣವನ್ನು ಅವರು ನೀಡಿಲ್ಲ.

ಆದರೆ ಇದರ ಜೊತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿರುವ ಕೆಎಚ್ ಮುನಿಯಪ್ಪ ಹಾಸನದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ ಇನ್ನು ಕೇವಲ ಮೂರು ತಿಂಗಳಿನಲ್ಲಿ ಅರ್ಹರಿಗೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ನೀಡಲಾಗುತ್ತದೆ ಈಗಾಗಲೇ ಅರ್ಜಿ ಸಲ್ಲಿಸಿರುವವರ ಅರ್ಜಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಬಿಜೆಪಿಯ ಅಧಿಕಾರದ ಅವಧಿಯಲ್ಲಿ ನಾಲ್ಕು ಚಕ್ರದ ವಾಹನ ಹೊಂದಿರುವ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ ಎನ್ನುವ ತೀರ್ಮಾನ ಇತ್ತು. ಆದರೆ ನಾವು ಈ ಬಾರಿ ಇದರ ಬಗ್ಗೆ ಯಾವುದೇ ನಿರ್ಧಾರಕ್ಕೂ ಬಂದಿಲ್ಲ ಈಗಾಗಲೇ ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ ಹೊಂದಿರುವವರು ಇದ್ದಾರೆ ಎಲ್ಲರಿಗೂ ಅಕ್ಕಿ ವಿತರಣೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಅರ್ಹರಿಗೆ ಯಾವುದೇ ರೀತಿಯ ತೊಂದರೆಯೂ ಆಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿಗೆ ಮುಂದಾದ ಸರ್ಕಾರ
ಇನ್ನು ಯಾರಿಗೆ ಅರ್ಹತೆ ಇಲ್ಲವೋ ಅಂತವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದು ರದ್ದಾಗುತ್ತದೆ ಜೊತೆಗೆ ಮರಣ ಹೊಂದಿದ 4.55 ಲಕ್ಷ ಜನರ ಹೆಸರನ್ನು ಕಡಿತಗೊಳಿಸಿರುವುದರಿಂದ ಸರ್ಕಾರಕ್ಕೆ ಆರರಿಂದ ಏಳು ಕೋಟಿಗಳಷ್ಟು ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Comments are closed.