PM Kisan Samman Scheme: ಸದ್ಯದಲ್ಲಿಯೇ ಬಿಡುಗಡೆಯಾಗಲಿರುವ ಪಿಎಂ ಕಿಸಾನ್ ಸಮ್ಮಾನ್ 2,೦೦೦ ರೂ. ತಂದೆಯ ಜೊತೆ ಮಗನಿಗೂ ಸಿಗಲಿದ್ಯಾ? 15 ನೇ ಕಂತಿನ ಹಣ ಯಾರ ಕೈಸೇರಲಿದೆ!  

PM Kisan Samman Scheme: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತವೆ. ಜನರ ಆರ್ಥಿಕ ಸ್ಥಿತಿ ಉತ್ತಮ ಪಡಿಸುವುದೇ ಈ ಎಲ್ಲ ಯೋಜನೆಗಳ ಗುರಿಯಾಗಿರುತ್ತದೆ. ಪ್ರಸ್ತುತ ಕೇಂದ್ರ ಸರ್ಕಾರವು ರೈತರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ಜಾರಿ ಗೊಳಿಸಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಪ್ರಮುಖವಾದುದಾಗಿದೆ. ಇದನ್ನೂ ಓದಿ: Lakshmi Pooja: ಶುಕ್ರವಾರದ ದಿನ ಈ ಒಂದು ಕೆಲಸ ಮಾಡಿದರೆ ಸಾಕು ಲಕ್ಷ್ಮಿ ಹಣದ ಹೊಳೆಯನ್ನೇ ಹರಿಸುತ್ತಾಳೆ; ಇಲ್ಲವಾದರೆ ಆಕೆ ನಿಮ್ಮತ್ತ ತಿರುಗಿಯೂ ನೋಡುವುದಿಲ್ಲ!

ಈ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ (Kisan Samman Yojana) ಯಡಿಯಲ್ಲಿ ಒಂದು ವರ್ಷಕ್ಕೆ ರೈತರಿಗೆ 6,೦೦೦ ರೂ.ಗಳನ್ನು ನೀಡಲಾಗುತ್ತದೆ. ಈ ಯೋಜನೆ ಪಡೆಯಲು ಫಲಾನುಭವಿಗಳು ಜಮೀನನ್ನು ಹೊಂದಿರಬೇಕಾಗುತ್ತದೆ. ಜಮೀನು ಹೊಂದಿದ ಮಾಲೀಕನ ಖಾತೆಗೆ ಹಣವನ್ನು ವರ್ಗಾಯಿಸಲಾಗುತ್ತದೆ. ಪ್ರತಿ 4ತಿಂಗಳಿಗೊಮ್ಮೆ ಈ ಹಣ ಜಮಾ ಮಾಡಲಾಗುತ್ತದೆ. ಈಗಾಗಲೇ ಈ ಯೋಜನೆಯ 14 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ 15ನೇ ಕಂತಿನ ಹಣ ರೈತರ ಖಾತೆಗೆ ಜಮಾ ಆಗಲಿದೆ.

ಈ ಯೋಜನೆ ಅಡಿಯಲ್ಲಿ ಈಗಾಗಲೇ ದೇಶದಲ್ಲಿ ಕೊಟ್ಯಂತರ ರೈತರು ಲಾಭ ಪಡೆದು ತಮ್ಮ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುತ್ತಿದ್ದಾರೆ. ರೈತರಿಗೆ ಈಗಿರುವ ಒಂದು ಅನುಮಾನವೆಂದರೆ ಈ ಯೋಜನೆ ಅಡಿಯಲ್ಲಿ ತಂದೆ- ಮಗ ಇಬ್ಬರು ಹಣ ಪಡೆದುಕೊಳ್ಳಬಹುದೇ ಎನ್ನುವುದು. ಆದರೆ ಸದ್ಯದ ಮಟ್ಟಿಗೆ ಇದು ಸಾಧ್ಯವಿಲ್ಲ ಎಂದೇ ಹೇಳಬಹುದು.

ಈ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಲಾಭ ಪಡೆಯಬೇಕಾದರೆ ಕೃಷಿ ಜಮೀನು ಹೊಂದಿರಬೇಕಾಗುತ್ತದೆ. ಆ ಕೃಷಿ ಜಮೀನು ಯಾರ ಹೆಸರಲ್ಲಿ ಇರುತ್ತದೆಯೋ ಅಥವಾ ಆ ಜಮೀನಿನ ಮಾಲಕ ಯಾರೋ ಆತನ ಖಾತೆಗೆ ಮಾತ್ರ ಹಣ ಜಮಾ ಮಾಡಲಾಗುತ್ತದೆ. ಕೆಲವೊಂದು ಮೋಸಗಳು ನಡೆಯುವ ಸಾಧ್ಯತೆಗಳು ಇರುವುದರಿಂದಲೇ ಈ ಯೋಜನೆಯಡಿಯಲ್ಲಿ ಪ್ರತಿ ವರ್ಷವು ಈ ಕೆವೈಸಿ ಮಾಡಿಸಿಕೊಳ್ಳಲು ಸೂಚಿಸಲಾಗುತ್ತದೆ. ಈ ಕೆವೈಸಿ ಮಾಡಿಸಿಕೊಳ್ಳದ ರೈತರನ್ನು ಫಲಾನುಭವಿಗಳ ಪಟ್ಟಿಯಿಂದ ಕೈ ಬಿಡಲಾಗುತ್ತದೆ.

ಹಾಗಾಗಿ ಒಂದು ಕುಟುಂಭದಲ್ಲಿ ತಂದೆಯು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾಗಿದ್ದರೆ ಆತನ ಮಗ ಈ ಯೋಜನೆಯ ಫಲಾನುಭವಿಯಾಗುವುದು ಅಸಾಧ್ಯ ಎಂದೇ ಹೇಳಬಹುದು. ಇದನ್ನೂ ಓದಿ: Gruhalakshmi Scheme: ತಾತ್ಕಾಲಿಕವಾಗಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ: ಲಕ್ಷಾಂತರ ಮಹಿಳೆಯರಿಗೆ ನಿರಾಸೆ!

ಪ್ರಸ್ತುತ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಡವರ, ರೈತರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಉದ್ಯಮ ಶುರು ಮಾಡುವ ಉತ್ಸಾಹ ಇರುವ ಯುವಕರಿಗಾಗಿ ಮುದ್ರಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸ್ವಂತ ಉದ್ಯಮ ಆರಂಭಿಸುವ ಇಚ್ಚೆ ಇದ್ದವರು ಹಣವಿಲ್ಲ ಎನ್ನುವ ಚಿಂತೆ ಬಿಟ್ಟು ಮುದ್ರಾ ಯೋಜನೆ (Mudra Yojana) ಯಡಿ ಸಾಲ ಸೌಲಭ್ಯ ಪಡೆದು ಸ್ವಂತ ಉದ್ಯಮ ಪ್ರಾರಂಭಿಸಬಹುದು. ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ನೀಡಲಿದೆ. ಸೂಕ್ತ ದಾಖಲಾತಿಗಳನ್ನು ಬ್ಯಾಂಕಿಗೆ ಸಲ್ಲಿಸಿ ನೀವು ಹಣ ಮಂಜೂರಿ ಮಾಡಿಸಿಕೊಂಡು ಉದ್ಯಮ ಪ್ರಾರಂಭಿಸಬಹುದು.

Comments are closed.