Ration Card Correction: ರೇಶನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ; ಇಂತಹ ಕಾರ್ಡ್ ರದ್ದಾಗೋದಿಲ್ಲ!

Ration Card Correction: ಪ್ರಸ್ತುತ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯೂ ಒಂದಾಗಿದೆ. ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿಯಾಗಲು ರೇಶನ್ ಕಾರ್ಡಿನಲ್ಲಿ ಮಹಿಳೆಯು ಮನೆಯ ಮುಖ್ಯಸ್ಥೆ ಆಗಿರಬೇಕು ಎನ್ನುವ ಕಂಡಿಷನ್ ರಾಜ್ಯ ಸರ್ಕಾರ ವಿಧಿಸಿದೆ. ಇದರಿಂದ ಅನೇಕರು ಈ ಯೋಜನೆ ಲಾಭ ಪಡೆಯಲು ವಿಫಲರಾಗಿದ್ದರು. ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪಡಿತರ ಚೀಟಿ ತಿದ್ದುಪಡಿಗೆ ಅನುಮತಿ ನೀಡಿದೆ.

ಹೌದು, ರಾಜ್ಯ ಸರ್ಕಾರವು ರಾಜ್ಯದಲ್ಲಿರುವ 117646 ಬಿಪಿಎಲ್ ಪಡಿತರ ಚೀಟಿದಾರರು (BBL Card) ತಮ್ಮ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದೆ. ಈ ಹಿಂದೆ ಬಿಪಿಎಲ್ ಕಾರ್ಡ್ದಾರರು ತಿದ್ದುಪಡಿ ಸಲುವಾಗಿ 3.18 ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಹೊಸದಾಗಿ ಪಡಿತರ ಚೀಟಿ ತಿದ್ದುಪಡಿ ಗಾಗಿ 53219 ಜನರು ಅರ್ಜಿ ಸಲ್ಲಿಸಿದ್ದರು. ಒಟ್ಟು 3.7೦ ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು.

ಹೀಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 117646 ಜನರು ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಳ್ಳಲು ಅರ್ಹರಿದ್ದಾರೆ. ಅವರು ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ಸರ್ಕಾರ ಹೇಳಿದೆ. 93362 ಜನರ ಬಿಪಿಎಲ್ ಕಾರ್ಡ್ದಾರರ ಅರ್ಜಿ ತಿರಸ್ಕೃತಗೊಂಡಿದೆ. ಆಹಾರ ಇಲಾಖೆಯ ನಿಯಮಗಳನ್ನು ಮೀರಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಇಲಾಖೆಯು ಶಾಕ್ ನೀಡಿದೆ.

ಇದರ ಜೊತೆ ಶೀಘ್ರದಲ್ಲಿಯೇ ಹೊಸ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳುವವರಿಗೂ ಸರ್ಕಾರ ಅನುಮತಿ ನೀಡಬಹುದು. ಇದಕ್ಕಾಗಿ ಸರ್ಕಾರದ ಮಟ್ಟದಲ್ಲಿ ಹಲವಾರು ಸಭೆಗಳು ನಡೆದಿದ್ದು, ಯಾವೊಬ್ಬ ಅರ್ಹ ಫಲಾನುಭವಿಯು ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಹೊರಗುಳಿಯಬಾರದು ಎನ್ನುವ ಸಲುವಾಗಿ ಹೊಸ ಪಡಿತರ ಚೀಟಿ ಮಾಡಿಸಿಕೊಳ್ಳಲು ಅನುಮತಿ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಇದಕ್ಕೂ ಇನ್ನೊಂದು ತಿಂಗಳಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಬಹುದು ಎಂದು ಊಹಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮಹಿಳೆಯರು ಮನೆಯ ಮುಖ್ಯಸ್ಥರಾಗಿದ್ದಲ್ಲಿ ಮಾತ್ರ ಗೃಹಲಕ್ಷ್ಮಿ ಯೋಜನೆ ಲಾಭ ಸಿಗುತ್ತಿತ್ತು. ಹಲವಾರು ರೇಶನ್ ಕಾರ್ಡ್ಗಳಲ್ಲಿ ಪುರುಷರು ಮನೆಯ ಮುಖ್ಯಸ್ಥರಾಗಿದ್ದರು. ಇದರಿಂದ ಅರ್ಹ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿದ್ದರು. ಅದಕ್ಕಾಗಿ ಸರ್ಕಾರವು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿತ್ತು.

Comments are closed.