Gruhalakshmi Scheme: ನೀವು ಈ ಕೆಲಸ ಮಾಡದಿದ್ರೆ ಗೃಹಲಕ್ಷ್ಮಿ ಯೋಜನೆ ಹಣ ಬರಲ್ಲ; ಕೂಡಲೇ ಈ ಕೆಲಸ ಮಾಡಿ 24 ಗಂಟೆ ಒಳಗೆ ಹಣ ಜಮಾ ಆಗುತ್ತೆ!

Gruhalakshmi Scheme: ಪ್ರಸುತ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹಿಳಾ ಸಬಲಿಕರಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಹಾಗೂ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಎರಡು ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದೆ. ಯುವ ನಿಧಿ ಯೋಜನೆಯನ್ನು ವರ್ಷಾಂತ್ಯಕ್ಕೆ ಜಾರಿ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ.

ಗೃಹಲಕ್ಷ್ಮಿ ಯೋಜನೆ ಆರಂಭವಾದಾಗಿನಿಂದಲೂ ಹಲವಾರು ಗೊಂದಲಗಳಿವೆ. ಇದರಿಂದಾಗಿ ಎಲ್ಲ ಫಲಾನುಭವಿಗಳಿಗೆ ಯೋಜನೆ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಯೋಜನೆ ಆರಂಭವಾಗಿ ಎರಡು ತಿಂಗಳಾದರೂ ಹಲವರ ಖಾತೆಗೆ ಇನ್ನೂ ಹಣ ಬಂದಿಲ್ಲ. ಇದರಿಂದಾಗಿ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ನಮ್ಮನ್ನು ಯೋಜನೆ ವ್ಯಾಪ್ತಿಯಿಂದ ಹೊರಗಿಟ್ಟರೆ, ಅಥವಾ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕೇ ಎನ್ನುವ ಚಿಂತೆಯಲ್ಲಿದ್ದಾರೆ. ಆದರೆ ಸರ್ಕಾರವು ಈ ಚಿಂತೆಯನ್ನು ಹೋಗಲಾಡಿಸುವ ಸಲುವಾಗಿ ಎಲ್ಲ ಫಲಾನುಭವಿಗಳ ಖಾತೆಗೂ ಹಣ ಹಾಕುವುದಾಗಿ ಭರವಸೆ ನೀಡಿದೆ. ಅಗಷ್ಟ ತಿಂಗಳ ಹಣ ಬಾರದೆ ಇರುವವರಿಗೆ ಸಪ್ಟೆಂಬರ್ನಲ್ಲಿ ಎರಡು ತಿಂಗಳ ಹಣ ಸೇರಿಸಿ ನಾಲ್ಕು ಸಾವಿರ ರೂ. ಜಮಾ ಮಾಡಲಾಗುವುದು ಎಂದು ತಿಳಿಸಿದೆ.

ಹೀಗೆ ಮಾಡಿದ್ರೆ ಬೇಗ ಬರುತ್ತೆ ಹಣ:

ಹಲವು ಜನರ ಪಡಿತರ ಚೀಟಿಯಲ್ಲಿ ಮನೆಯ ಮುಖ್ಯಸ್ಥರು ಪುರುಷರಾಗಿರುವುದರಿಂದ ಹಣ ವರ್ಗಾವಣೆ ಆಗಿರುವುದಿಲ್ಲ. ಹಾಗಾಗಿಯೇ ಸರ್ಕಾರ ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಿದೆ. ಇದರಿಂದ ಪಡಿತರ ಚೀಟಿಯಲ್ಲಿ ಮಹಿಳೆಯರು ಮುಖ್ಯಸ್ಥರು ಎಂದು ಕಾಣಿಸುವವರೆಗೂ ನಿಮ್ಮ ಖಾತೆಗೆ ಹಣ ಬರುವುದಿಲ್ಲ. ಅದಕ್ಕಾಗಿ ಕೂಡಲೇ ನಿಮ್ಮ ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಿಸಿಕೊಳ್ಳಿ. ಇದರ ಜೊತೆ ಪಡಿತರ ಚೀಟಿಗೆ ನಿಮ್ಮ ಆಧಾರ್ ನಂಬರ್ ಲಿಂಕ್ ಆಗಿದಿಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಿ. ಒಂದು ವೇಳೆ ಲಿಂಕ್ ಆಗದಿದ್ದಲ್ಲಿ ಕೂಡಲೇ ಮಾಡಿಸಿಕೊಳ್ಳಿ. ಇದರಿಂದಾಗಿಯೂ ನಿಮ್ಮ ಹಣ ಜಮ ಆಗುವುದು ತಡ ಆಗಬಹುದು.

ಇನ್ನು ಹಲವು ಫಲಾನುಭವಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದೆ. ಇನ್ನು ಹಲವರ ಖಾತೆಗಳಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿರುವುದರಿಂದ ನಿಮಗೆ ಹಣ ಜಮಾ ಆಗುವುದು ವಿಳಂಭವಾಗುತ್ತಿರಬಹುದು. ಕೂಡಲೇ ಬ್ಯಾಂಕ್ಗೆ ಭೇಟಿ ನೀಡಿ ನಿಮ್ಮ ಖಾತೆಯನ್ನು ಎಕ್ಟಿವ್ ಮಾಡಿಸಿಕೊಳ್ಳಿ.

ಗೃಹಲಕ್ಷ್ಮಿ ಯೋಜನೆ ಸ್ಟೇಟಸ್ ತಿಳಿದುಕೊಳ್ಳಿ;

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ, ಎಲ್ಲ ದಾಖಲೆಗಳು ಸರಿ ಇದ್ದಾಗ್ಯೂ ನಿಮ್ಮ ಖಾತೆಗೆ ಹಣ ಬರುತ್ತಿಲ್ಲ ಎಂದಾದರೆ ನೀವು ಅರ್ಜಿ ಸಲ್ಲಿಸಿರುವ ಕೇಂದ್ರಕ್ಕೆ ತೆರಳಿ ನಿಮ್ಮ ಅರ್ಜಿ ಸ್ಥಿತಿ ಪರಿಶೀಲಿಸಿಕೊಳ್ಳುವುದು ಒಳಿತು.

Comments are closed.