Free bus: ಫ್ರೀ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಏನದು ಗೊತ್ತಾ?

Free bus: ಪ್ರಸ್ತುತ ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಮಹಿಳಾ ಸಬಲಿಕರಣಕ್ಕಾಗಿ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದೆ. ಶಕ್ತಿ ಯೋಜನೆಯಡಿ ರಾಜ್ಯದ ಒಳಗೆ ಎಲ್ಲಿಗೆ ಬೇಕಾದರೂ ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮಾ ಮಾಡಲಾಗುತ್ತದೆ. ಇದೇ ವೇಳೆ ರಾಜ್ಯ ಸರ್ಕಾರವು ಇನ್ನೊಂದು ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಶಕ್ತಿ ಗ್ಯಾರಂಟಿ ಯೋಜನೆ ಆರಂಭವಾದಾಗಿನಿಂದ ಬಸ್ನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಅಲ್ಲದೆ ದೇಗುಲಗಳಲ್ಲೂ ಭಕ್ತರ ಸಂಖ್ಯೆ ಹೆಚ್ಚಿದೆ. ಈ ಶಕ್ತಿ ಯೋಜನೆ ಉಪಯೋಗಿಸಿಕೊಂಡು ಮಹಿಳಾ ಭಕ್ತರು ರಾಜ್ಯದ ದೇವಾಲಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಭೇಟಿ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿದ್ದು, ಶಕ್ತಿ ಯೋಜನೆಯಿಂದ ಮಹಿಳೆಯರ ಸಬಲಿಕರಣ ಸಾಧ್ಯವಾಗಿದೆ. ಸಾರ್ವಜನಿಕ ಸಾರಿಗೆ ಯೋಜನೆಗೆ ಇನ್ನಷ್ಟು ಬಲ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಹೊಸ ಬಸ್ಗಳ ಖರೀದಿ:

ಶಕ್ತಿ ಯೋಜನೆಯಿಂದ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಇದೇ ವೇಳೆ ಹಲವು ಹಳ್ಳಿಗಳಿಗೆ ಇನ್ನೂ ಬಸ್ ಸಂಚಾರ ಇಲ್ಲದಿರುವ ವಿಚಾರವು ಬೆಳಕಿಗೆ ಬಂದಿದೆ. ಇದು ಸಚಿವರ ಗಮನಕ್ಕೂ ಬಂದಿದೆ. ಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ರಾಜ್ಯದ ನಾಲ್ಕು ನಿಗಮಗಳಿಂದ ನಾಲ್ಕು ಸಾವಿರ ಬಸ್ಗಳನ್ನು ಖರೀದಿಸಲಾಗುವುದು. ಈ ಮೂಲಕ ರಸ್ತೆ ಸರಿ ಇರುವಂತಹ ಹಳ್ಳಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ:

ಶಕ್ತಿ ಗ್ಯಾರಂಟಿ ಯೋಜನೆ ಆರಂಭಿಸಿದ ನಂತರ ರಾಜ್ಯ ಸಾರಿಗೆ ಬಸ್ಗಳು ರಶ್ ಆಗಿ ಸಂಚರಿಸಲು ಆರಂಭಿಸಿದೆ. ಮೊದಲೆಲ್ಲ ಹಣ ನೀಡಿ ಪ್ರಯಾಣ ಮಾಡಬೇಕಿತ್ತು. ಇದೀಗ ಮಹಿಳೆಯರು ರಾಜ್ಯದ ಒಳಗೆ ಎಲ್ಲಿಗೆ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಈ ರೀತಿ ಪ್ರಯಾಣಿಸುವವರ ಸಂಖ್ಯೆ ವಾರದಿಂದ ವಾರಕ್ಕೆ ಹೆಚ್ಚಳ ಆಗುತ್ತಲೇ ಇದೆ.

ಮಹಿಳೆಯರನ್ನು ಅಪಹಾಸ್ಯ ಮಾಡಿದ್ರೆ ಹುಷಾರ್:

ಮಹಿಳೆಯರು ಬಸ್ನಲ್ಲಿ ಅಪಹಾಸ್ಯ, ನಿಂದನೆಗೆ ಒಳಗಾಗುತ್ತಿರುವ ವಿಚಾರವೂ ತಿಳಿದುಬಂದಿದೆ. ಅಲ್ಲದೆ ಬಸ್ಗಳನ್ನು ನಿಲುಗಡೆ ಸ್ಥಳದಲ್ಲಿ ನಿಲ್ಲಿಸುತ್ತಿಲ್ಲ. ಎಲ್ಲ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿಲ್ಲ ಎನ್ನುವ ದೂರು ಕೇಳಿಬಂದಿದೆ. ಇನ್ನು ಮುಂದೆ ಈ ರೀತಿ ಆದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.