Ration Card: ಹೊಸ ಪಡಿತರ ಚೀಟಿ ವಿತರಣೆಗೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರದ; ಇದೇ ದಿನಾಂಕ ಬಿಡುಗಡೆ!

New Ration Card Distribution: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಗ್ಯಾರಂಟಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಪಡಿತರ ಚೀಟಿ ಅವಶ್ಯವಾಗಿದೆ. ಏಕೆಂದರೆ ಫಲಾನುಭವಿಗಳ ಆಯ್ಕೆ ಮಾಡುವ ವೇಳೆ ರಾಜ್ಯ ಸರ್ಕಾರ ಪಡಿತರ ಚೀಟಿಯನ್ನು ಪ್ರಮುಖ ದಾಖಲೆಯಾಗಿ ಪರಿಗಣಿಸಿದೆ. ಹಾಗಾಗಿ ರಾಜ್ಯದಲ್ಲಿ ಲಕ್ಷಾಂತರ ಜನರು ಪಡಿತರ ಚೀಟಿ ನೀಡಿ ಎಂದು ಒತ್ತಾಯ ಮಾಡಿದ್ದರು. ಇದೀಗ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿ Ration Card ಪಡೆದುಕೊಳ್ಳಲು ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

New Ration Card Distribution by Food Department here are the Details.

2023ರ ವಿಧಾನಸಭಾ ಚುನಾವಣಾ ವೇಳೆ ಹೊಸ ಪಡಿತರ ಚೀಟಿ Ration Card ವಿತರಣೆ ಮಾಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರವು ಅರ್ಹ ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿ ವಿತರಣೆ ಮಾಡಲು ಮುಂದಾಗಿದೆ.

ಈ ಹೊಸ ಪಡಿತರ ಚೀಟಿ ಪಡೆದುಕೊಂಡು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗಿದ್ದರೂ ಆರೋಗ್ಯ ಸೇವೆಗಳ ಉಪಯೋಗ ತೆಗೆದುಕೊಳ್ಳಬಹುದಾಗಿದೆ.

ಹೊಸ ಪಡಿತರ ಚೀಟಿಗೆ 2..90 ಲಕ್ಷ ಜನರಿಂದ ಅರ್ಜಿ:

ನಮ್ಮ ರಾಜ್ಯದಲ್ಲಿ ಹೊಸ ಪಡಿತರ ಚೀಟಿ ನೀಡಿ ಎಂದು ಸುಮಾರು 2.90 ಲಕ್ಷ ಜನರು ಈಗಾಗಲೇ ಅರ್ಜಿ ಸಲ್ಲಿಸಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಆದಷ್ಟು ಬೇಗ ಆಹಾರ ಇಲಾಖೆ ಅಧಿಕಾರಿಗಳು ಈ ಎಲ್ಲ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹರಿಗೆ ಹೊಸ ಪಡಿತರ ಚೀಟಿ ನೀಡಲಿದ್ದಾರೆ ಎಂದು ಆಹಾರ ಹಾಗೂ ನಾಗರೀಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮಾಹಿತಿ ನೀಡಿದ್ದಾರೆ.

2.90 ಲಕ್ಷ ಜನರಿಗೆ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿ ನೀಡಲು ನಿರ್ಧಾರ ಕೈಗೊಂಡಿದೆ. ಈ ವಿಚಾರ ಸಣ್ಣದಾದರೂ ಬಡವರ ಮೊಗದಲ್ಲಿ ಮಂದಹಾಸ ಮೂಡಿಸಲಿದೆ. ಬಿಪಿಎಲ್ ರೇಶನ್ ಕಾರ್ಡ್ Ration Card ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಪ್ರತಿ ತಿಂಗಳು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ 5 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಅಲ್ಲದೆ ರಾಜ್ಯ ಸರ್ಕಾರವು ಅನ್ನ ಭಾಗ್ಯ ಗ್ಯಾರಂಟಿ ಯೋಜನೆ ಅಡಿ 5 ಕೆ.ಜಿ ಅಕ್ಕಿಯ ಹಣವನ್ನು ಫಲಾನುಭವಿಯ ಖಾತೆಗೆ ಜಮಾ ಮಾಡುತ್ತಿದೆ.

ಈ ಎಲ್ಲ ಕಾರಣಗಳಿಂದ ಲಕ್ಷಾಂತರ ಜನರು ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಪಡಿತರ ಚೀಟಿಯು ನಮ್ಮ ದೇಶದಲ್ಲಿ ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಪ್ರಮುಖ ದಾಖಲೆಯಾಗಿ ಮಾರ್ಪಟ್ಟಿದೆ. ಈಗಾಲೇ ರಾಜ್ಯದ ಬಹುತೇಕ ಜನರು ಪಡಿತರ ಚೀಟಿಯನ್ನು Ration Card ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಿಸಿದ್ದಾರೆ. ಇದುವರೆಗೂ ಮಾಡಿಸಿಕೊಳ್ಳದವರು ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ ಲಿಂಕ್ ಮಾಡಿಸಿಕೊಳ್ಳುವುದು ಉತ್ತಮ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರಿ ಸೌಲಭ್ಯದಿಂದ ನೀವು ವಂಚಿತರಾದರೂ ಅಚ್ಚರಿಯಿಲ್ಲ.

Comments are closed.