Sandalwood: ಸಿನಿಮಾ ಮಾಡುತ್ತಿಲ್ಲ, ಆದರೂ ಕರುನಾಡಿನ ಅತ್ತಿಗೆ ರಾಧಿಕಾ ರವರ ಆಸ್ತಿ ಎಷ್ಟು ಗೊತ್ತೇ? ಹೇಗೆ ಬಂತು ಇಷ್ಟೊಂದು??

Sandalwood: ಅತ್ಯಂತ ಕಡಿಮೆ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿರುವಂತಹ ನಟಿಯರಲ್ಲಿ ರಾಧಿಕಾ ಕುಮಾರಸ್ವಾಮಿ ಕೂಡ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. 2002ರಲ್ಲಿ ಬಿಡುಗಡೆಯಾದಂತಹ ನಿನಗಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವಂತಹ ರಾಧಿಕಾ ಮತ್ತೆ ತಮ್ಮ ಚಿತ್ರರಂಗದ ಕರಿಯರ್ ನಲ್ಲಿ ಹಿಂದಿರುಗಿ ನೋಡಿದ್ದೇ ಇಲ್ಲ. ಸದ್ಯದ ಮಟ್ಟಿಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದಲ್ಲಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿದ್ದಾರೆ ಹಾಗೂ ನಿರ್ಮಾಪಕಿಯಾಗಿ ಸಿನಿಮಾಗಳ ನಿರ್ಮಾಣ ಮಾಡುತ್ತಿದ್ದಾರೆ.

ರಾಧಿಕಾ ಕುಮಾರಸ್ವಾಮಿ ಅವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ ತಮ್ಮ ಹದಿನಾಲ್ಕನೇ ವಯಸ್ಸಿನಲ್ಲಿ ರತನ್ ಕುಮಾರ್ ಅನುರನ ಮದುವೆಯಾಗುತ್ತಾರೆ ಆದರೆ ಅವರು ಹೃದಯ-ಘಾತ ಸಮಸ್ಯೆಯಿಂದಾಗಿ ಮರಣವನ್ನಪ್ಪುತ್ತಾರೆ. ಅದಾದ ನಂತರವೇ ಅವರು ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದು. ಚಿತ್ರರಂಗದಲ್ಲಿ ನಟಿಸುವಾಗ ರಾಧಿಕಾ ಕುಮಾರಸ್ವಾಮಿ ಅವರು 9ನೇ ತರಗತಿಯಲ್ಲಿ ಓದುತ್ತಿದ್ದರು. ಕನ್ನಡ ಚಿತ್ರರಂಗದಲ್ಲಿ ಶಿವಣ್ಣನ ತಂಗಿಯ ಪಾತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಳ್ಳುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಒಟ್ಟಾರೆಯಾಗಿ 30ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುತ್ತಾರೆ.

ಆ ನಡುವೆ ಕುಮಾರಸ್ವಾಮಿ ಅವರನ್ನು ಮದುವೆಯಾಗಿ ಚಿತ್ರರಂಗದಿಂದ ದೂರವಿದ್ದ ರಾಧಿಕಾ ಕುಮಾರಸ್ವಾಮಿ ಸಾಕಷ್ಟು ವರ್ಷಗಳ ನಂತರ ಅಂದ್ರೆ 2012ರಲ್ಲಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಮ್ಯಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಲಕ್ಕಿ ಸಿನಿಮಾದ ನಿರ್ಮಾಪಕಿಯಾಗಿ ಕನ್ನಡ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಾರೆ. ನಿರ್ಮಾಪಕವಾಗಿ ಕಾಣಿಸಿಕೊಂಡ ಮೊದಲ ಸಿನಿಮಾವೇ ಸೂಪರ್ ಹಿಟ್ ಯಶಸ್ವಿಯಾಗುತ್ತದೆ. ಅದಾದ ನಂತರ ದಮಯಂತಿ ಎನ್ನುವ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ನಟನೆಯಲ್ಲಿ ಕೂಡ ಯಶಸ್ವಿ ಕಂಬ್ಯಾಕ್ ಮಾಡಿದ್ದಾರೆ.

ಸದ್ಯದ ಮಟ್ಟಿಗೆ ಬಾಲಿವುಡ್ ಚಿತ್ರರಂಗದ ಖ್ಯಾತ ಕಲಾವಿದ ಆಗಿರುವಂತಹ ಶ್ರೇಯಸ್ ತಲ್ಪಡೆ ರವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವಂತಹ ಅಜಾಗ್ರತ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಈ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎನ್ನುವಂತಹ ಸುದ್ದಿ ಇದೆ. ಒಂದು ಕಾಲದಲ್ಲಿ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಮಧ್ಯಮ ವರ್ಗದ ಈ ಹುಡುಗಿ ಇವತ್ತು ಕನ್ನಡ ಚಿತ್ರರಂಗದ ರಾಧಿಕಾ ಕುಮಾರಸ್ವಾಮಿಯಾಗಿ 124 ಕೋಟಿಗೂ ಹೆಚ್ಚಿನ ಆಸ್ತಿಯ ಒಡತಿಯಾಗಿದ್ದಾರೆ ಅನ್ನೋದಾಗಿ ಮಾಧ್ಯಮ ಮೂಲಗಳು ತಿಳಿಸಿವೆ.

UPI ಪೇಮೆಂಟ್ ಬೈ ಮಿಸ್ಟೇಕ್ ಆಗಿ ಬೇರೆಯವರ ಖಾತೆಗೆ ಹೋಯ್ತಾ? ನಿಮ್ಮ ಹಣ ಎಲ್ಲೂ ಹೋಗಲ್ಲ, ಹೀಗೆ ಮಾಡಿ ಹಣ ಹಿಂಪಡೆದುಕೊಳ್ಳಿ!

ಚಿತ್ರರಂಗದಲ್ಲಿ ಕಾಣಿಸಿಕೊಂಡಿದ್ದು ಇತ್ತೀಚಿಗೆ ಕಡಿಮೆ ಆಗಿದ್ದರೂ ಕೂಡ ರಾಧಿಕಾ ಕುಮಾರಸ್ವಾಮಿ ಅವರ ಆದಾಯ ಮಾತ್ರ ಕಡಿಮೆಯಾಗಿಲ್ಲ ಅನ್ನೋದನ್ನ ಈ ಮೂಲಕ ನಾವು ತಿಳಿದುಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ರಾಧಿಕಾ ಕುಮಾರಸ್ವಾಮಿ ಇನ್ನಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಹಾಗೂ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ರಾಧಿಕಾ ಕುಮಾರಸ್ವಾಮಿ ಅವರ ಆಸ್ತಿಯನ್ನು ನೋಡಿದ ಮೇಲೆ ಇಷ್ಟೊಂದು ಆಸ್ತಿ ಯಾವ ರೀತಿಯಲ್ಲಿ ಬಂತು ಅಂತ ಪ್ರಶ್ನೆ ಕೇಳೋರು ಹೆಚ್ಚಾಗಿದ್ದಾರೆ ಅನ್ನಬಹುದು.

Comments are closed.