Political news: ಮಂಡ್ಯದಲ್ಲಿ BJP ಆಟ ಶುರು- JDS ಹಾಗೂ ಕಾಂಗ್ರೆಸ್ ಗೆ ಒಮ್ಮೆಲೇ ಶಾಕ್. ಏನಾಗಿದೆ ಗೊತ್ತೇ?

Political news: ಮುಂಬರುವ ಲೋಕಸಭಾ ಚುನಾವಣೆ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಸ್ವಲ್ಪಮಟ್ಟಿಗೆ ಹೆಚ್ಚಿನ ಕಾವನ್ನು ಪಡೆದುಕೊಂಡಿದೆ ಎಂದು ಹೇಳಬಹುದಾಗಿದೆ. ಅದರಲ್ಲೂ ವಿಶೇಷವಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎಂದಿಗಿಂತ ಹೆಚ್ಚಿನ ಸ್ಪರ್ಧೆ ಏರ್ಪಡುವಂತಹ ಸಾಧ್ಯತೆ ಚುನಾವಣೆಗು ಮುಂಚೆ ಪ್ರಾರಂಭವಾಗಿದೆ. ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ರವರು ಗೆದ್ದು ಬಂದಿದ್ದರು. ಆದರೂ ಸದ್ಯದ ಮಟ್ಟಿಗೆ ಈ ಲೋಕಸಭೆ ಚುನಾವಣೆಯ ಪರಿಸ್ಥಿತಿಯನ್ನು ನೋಡಿದರೆ ಈ ಬಾರಿಯ ಸಾದ್ಯಾಸಾಧ್ಯತೆಗಳು ಬೇರೆ ಆಗುವ ಸಾಧ್ಯತೆ ಇದೆ.

ಈ ಬಾರಿಯ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ನಿಮಗೆಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಹೀಗಾಗಿ ತಿಳಿದುಬಂದಿರುವಂತಹ ಮಾಹಿತಿಗಳ ಪ್ರಕಾರ ಬಹುತೇಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವುದು ಖಚಿತ ಎಂಬ ಮಾಹಿತಿಗಳು ಕೇಳಿ ಬರುತ್ತಿದೆ. ಇದರ ನಡುವಲ್ಲಿಯೇ ತಮ್ಮ ಆಪ್ತರಾಗಿರುವಂತಹ ದರ್ಶನ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಂತಹ ಆಪ್ತರ ಜೊತೆಗೆ ಸಮಾಲೋಚನೆ ನಡೆಸಿರುವಂತಹ ಸುಮಲತಾ ಅಂಬರೀಶ್ ರವರು ಬೇರೆಯದೆ ಹೇಳಿಕೆಯನ್ನು ನೀಡಿದ್ದಾರೆ.

ಮಂಡ್ಯ ಅಂಬರೀಶ್‍ರವರ ನಾಡು. ಹೀಗಾಗಿ ಮಂಡ್ಯವನ್ನು ಬಿಟ್ಟು ಕೊಡುವಂತಹ ಪ್ರಮೇಯವೇ ಇಲ್ಲ ಎಂಬುದಾಗಿ ಸುಮಲತಾ ಅಂಬರೀಶ್ ರವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಕೇವಲ ಇಷ್ಟು ಮಾತ್ರ ಅಲ್ಲದೆ ನಾನು ಸದ್ಯಕ್ಕೆ ಬಿಜೆಪಿಯ ಪಕ್ಷದ ಸದಸ್ಯ ಆಗಿರದೆ ಇರಬಹುದು ಆದರೆ ಮುಂದಿನ ದಿನಗಳಲ್ಲಿ ಅಂದರೆ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ನಾನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿದ್ದೇನೆ ಎಂಬುದಾಗಿ ಹೇಳಿಕೊಂಡಿದ್ದಾರೆ. ಈ ಹೇಳಿಕೆ ಇನ್ನಷ್ಟು ಕುತೂಹಲವನ್ನು ಹೆಚ್ಚಿಸಿದೆ.

ಈ ಬಗ್ಗೆ ಮಂಡ್ಯ ಕ್ಷೇತ್ರದಲ್ಲಿ ಬೆಂಬಲಿಗರ ನಡುವೆ ಸಮಾಲೋಚನೆಯನ್ನು ಕೂಡ ನಡೆಸಲಾಗಿದ್ದು ಪ್ರತಿಯೊಬ್ಬರೂ ಬಿಜೆಪಿಯಿಂದಲೇ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಎಂಬುದಾಗಿ ಸಲಹೆಯನ್ನು ನೀಡಿದ್ದಾರೆ ಎಂಬುದಾಗಿ ಸುಮಲತಾ ಅಂಬರೀಶ್ ಅವರು ಹೇಳಿಕೊಂಡಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಕೂಡ ಬಿಜೆಪಿ ಪಕ್ಷ ನೇರವಾಗಿಯೇ ಸುಮಲತಾ ಅಂಬರೀಶ್ ಅವರಿಗೆ ತಮ್ಮ ಬೆಂಬಲವನ್ನು ನೀಡಿರುವುದನ್ನು ಕೂಡ ನಾವು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಈ ಬಾರಿಯ ಟಿಕೆಟ್ ಅವಕಾಶದಲ್ಲಿ ಬಿಜೆಪಿ ನನಗೆ ಮೊದಲ ಆದ್ಯತೆ ನೀಡುತ್ತದೆ ಎಂಬುದಾಗಿ ನಾನು ಭಾವಿಸಿದ್ದೇನೆ ಹಾಗೂ ಕುಮಾರಸ್ವಾಮಿ ಅವರು ಎಲ್ಲೂ ಕೂಡ ನಾನು ಸ್ಪರ್ಧಿಸುತ್ತೇನೆ ಎಂಬುದಾಗಿ ಹೇಳಿಕೊಂಡಿಲ್ಲ ಎನ್ನುವುದನ್ನು ಕೂಡ ಇಲ್ಲಿ ಉಲ್ಲೇಖಿಸಿದ್ದಾರೆ. ಎಲ್ಲ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ನೋಡಿ ನಿರ್ಧಾರ ಮಾಡುತ್ತದೆ ಹೀಗಾಗಿ ನಿರ್ಧಾರ ನನ್ನ ಪರವಾಗಿ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಬಿಜೆಪಿ ಲೋಕಸಭಾ ಚುನಾವಣೆಯ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಹಿರಂಗಗೊಳಿಸುವ ಸಾಧ್ಯತೆ ಇದ್ದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಒಲಿಯುವ ಸಾಧ್ಯತೆ ಇದೆ ಎಂಬುದನ್ನು ಕಾದು ನೋಡಬೇಕಾಗಿದೆ.

Comments are closed.