Sandalwood: ಈ ವಯಸ್ಸಿನಲ್ಲೂ ಸ್ಯಾಂಡಲ್ವುಡ್ ನಲ್ಲಿ ಮಿಂಚುತ್ತಿರುವ ನಟಿ ರಾಧಿಕಾ ಕುಮಾರಸ್ವಾಮಿ ಅವರು ಆಸ್ತಿಯ ಮೌಲ್ಯ ಎಷ್ಟು ಗೊತ್ತಾ?

Sandalwood: 2002ರಲ್ಲಿ ವಿಜಯ್ ರಾಘವೇಂದ್ರ ನಾಯಕನಟನಾಗಿ ಕಾಣಿಸಿಕೊಂಡ ನಿನಗಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಮೊದಲ ಬಾರಿಗೆ ಕನ್ನಡಿಗರಿಗೆ ಪರಿಚಿತರಾದ ರಾಧಿಕಾ ಅವರು ನಂತರದ ದಿನಗಳಲ್ಲಿ ರಾಧಿಕಾ ಕುಮಾರಸ್ವಾಮಿ ಯಾಗಿ ಪರಿವರ್ತನೆ ಆಗಿರುವುದು ನಿಮಗೆಲ್ಲರಿಗೂ ತಿಳಿದಿರುವಂತಹ ವಿಚಾರವಾಗಿದೆ. ಕನ್ನಡ ಚಿತ್ರರಂಗದ ಅತ್ಯಂತ ಬಹು ಬೇಡಿಕೆಯ ನಾಯಕನಟಿಯಾಗಿದ್ದ ರಾಧಿಕಾ ಕುಮಾರಸ್ವಾಮಿ ಅವರು ಈ ವಯಸ್ಸಿನಲ್ಲಿ ಕೂಡ ಮತ್ತೆ ಕನ್ನಡ ಚಿತ್ರರಂಗದಲ್ಲಿ ತಮ್ಮ ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದು ನಿರ್ಮಾಪಕವಾಗಿ ಕೂಡ ಸಾಕಷ್ಟು ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಇದುವರೆಗೂ ಕನ್ನಡ ಚಿತ್ರರಂಗದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು 30ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಾಯಕಿಯಾಗಿ ಹಾಗೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ದೊಡ್ಡ ಮಟ್ಟದ ಸ್ಟಾರ್ ನಟರ ಜೊತೆಗೂ ಕೂಡ ನಾಯಕಿ ಆಗಿ ಕಾಣಿಸಿಕೊಂಡಿರುವಂತಹ ರಾಧಿಕಾ ಕುಮಾರಸ್ವಾಮಿ ಇವತ್ತಿಗೂ ಕೂಡ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವಂತಹ ನಟಿಯರಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. ಇನ್ನು ಅವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ 2006ರಲ್ಲಿ ಕುಮಾರಸ್ವಾಮಿ ಅವರನ್ನ ಮದುವೆಯಾಗಿದ್ದ ರಾಧಿಕಾ ಅವರು 2010ರಲ್ಲಿ ಇದರ ಬಗ್ಗೆ ಅಧಿಕೃತವಾಗಿ ಬಹಿರಂಗಪಡಿಸುತ್ತಾರೆ. ಇನ್ನು ಇವರಿಗೆ ಶಮಿಕ ಕುಮಾರಸ್ವಾಮಿ ಎಂಬ ಮಗಳು ಕೂಡ ಇದ್ದಾರೆ. ಮಾಜಿ ಮುಖ್ಯಮಂತ್ರಿ ಆಗಿರುವಂತಹ ಹೆಚ್ ಡಿ ಕುಮಾರಸ್ವಾಮಿ ಅವರ ಎರಡನೇ ಪತ್ನಿ ಯಾಗಿರುವ ರಾಧಿಕಾ ಕುಮಾರಸ್ವಾಮಿ ಅವರು ಮದುವೆಯಾಗುವಾಗ ಅವರಿಗೆ 27 ವರ್ಷ ವಯಸ್ಸಾಗಿತ್ತು.

ರಾಧಿಕಾ ಕುಮಾರಸ್ವಾಮಿಯವರ ಆಸ್ತಿಯ ಮೌಲ್ಯ ಎಷ್ಟು ಗೊತ್ತಾ?

ಸಾಕಷ್ಟು ವರ್ಷಗಳಿಂದ ಚಿತ್ರರಂಗದಿಂದ ದೂರವಿದ್ದ ರಾಧಿಕಾ ಕುಮಾರಸ್ವಾಮಿ ಈಗ ಮತ್ತೆ ನಿರ್ಮಾಪಕವಾಗಿ ಹಾಗೂ ನಾಯಕ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ತಮ್ಮ ಸ್ವಂತ ಹೋಂ ಬ್ಯಾನರ್ ಮೂಲಕ ವಾಪಸ್ ಆಗಿದ್ದಾರೆ ಎಂದು ಹೇಳಬಹುದು. ರಾಧಿಕಾ ಕುಮಾರಸ್ವಾಮಿ ಅವರ ಒಟ್ಟು ಆಸ್ತಿಯ ಮೌಲ್ಯ 121 ಕೋಟಿಗೂ ಹೆಚ್ಚು ಎಂಬುದಾಗಿ ತಿಳಿದು ಬಂದಿದೆ. ಸದ್ಯಕ್ಕೆ ನೋಡುವುದಾದರೆ ರಾಧಿಕಾ ಕುಮಾರಸ್ವಾಮಿ ಅವರ ಸ್ವಂತ ಹೋಂ ಪ್ರೊಡಕ್ಷನ್ ನಲ್ಲಿ ಬೈರಾದೇವಿ ಹಾಗೂ ಅಜಾಗೃತ ಎನ್ನುವಂತಹ ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಎರಡು ಸಿನಿಮಾಗಳು ಕೂಡ ಬಿಡುಗಡೆ ಆಗಬೇಕಾಗಿರುವುದು ಬಾಕಿ ಉಳಿದಿದೆ. ಬಿಡುಗಡೆ ದಿನಾಂಕದ ಬಗ್ಗೆ ರಾಧಿಕಾ ಕುಮಾರಸ್ವಾಮಿ ಅವರು ಇದುವರೆಗೂ ಯಾವುದೇ ರೀತಿಯಾಗಿ ಅಧಿಕೃತವಾಗಿ ಹೇಳಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಮಾಹಿತಿ ನೀಡುವಂತಹ ಸಾಧ್ಯತೆ ಹೆಚ್ಚಾಗಿದೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ಕೂಡ ರಾಧಿಕಾ ಕುಮಾರಸ್ವಾಮಿ ಆಕ್ಟಿವ್ ಆಗಿದ್ದಾರೆ.

ಸಾಕಷ್ಟು ಹೊಸ ನಾಯಕನಟಿಯರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ರು ಕೂಡ ರಾಧಿಕಾ ಕುಮಾರಸ್ವಾಮಿ ಅವರ ಜನಪ್ರಿಯತೆ ಈಗಲೂ ಕೂಡ ಕಡಿಮೆಯಾಗಿಲ್ಲ ಅಂತ ಸ್ಪಷ್ಟವಾಗಿ ಕಂಡುಬರುತ್ತದೆ.

Comments are closed.