Government Scheme: ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬಿಡುಗಡೆಯಾಗುತ್ತೆ ಗೊತ್ತಾ? ಸಿಕ್ತು ಸರ್ಕಾರದಿಂದ ಬಿಗ್ ಅಪ್ಡೇಡ್!

Government Scheme: ರಾಜ್ಯದ ಕಾಂಗ್ರೆಸ್ ಸರ್ಕಾರ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಜ್ಯದ ಮನೆಯ ಒಡತಿ ಮಹಿಳೆಯನ್ನು ಆರ್ಥಿಕವಾಗಿ ಬೆಂಬಲಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳ 2000 ಹಣವನ್ನು ನೀಡುವಂತಹ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು. ಈಗಾಗಲೇ ಸಾಕಷ್ಟು ಸಮಯಗಳಿಂದಲೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನ ರಾಜ್ಯ ಸರ್ಕಾರ ಡೈರೆಕ್ಟ್ ಬ್ಯಾಂಕ್ ಟ್ರಾನ್ಸ್ಫರ್ ಸಿಸ್ಟಮ್ ಮೂಲಕ ಮನೆಯ ಯಜಮಾನಿಯ ಖಾತೆಗೆ ವರ್ಗಾವಣೆ ಮಾಡುವಂತಹ ಕೆಲಸವನ್ನು ಮಾಡಿಕೊಂಡು ಬರುತ್ತಿದೆ.

ಜೂನ್ ತಿಂಗಳ ಹಣ ಯಾವಾಗ ಸಿಗುತ್ತೆ?

ಈಗಾಗಲೇ ಕಳೆದ ತಿಂಗಳ ಹಣ ಮನೆಯ ಯಜಮಾನಿಯರ ಖಾತೆಗೆ ನೇರವಾಗಿ ವರ್ಗಾವಣೆ ಆಗಿದೆ ಎನ್ನುವುದಾಗಿ ತಿಳಿದು ಬಂದಿದ್ದು ಈಗಿನ ಅಂದರೆ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಯಾವಾಗ ಸಿಗುತ್ತೆ ಅನ್ನೋದಾಗಿ ಪ್ರತಿಯೊಬ್ಬರೂ ಕೂಡ ಯೋಚಿಸುತ್ತಿದ್ದಾರೆ. ಇದರ ನಡುವೆ ಕೆಲವರಿಗೆ ಹತ್ತನೇ ಕಂತಿನ ಹಣ ಕೂಡ ಕ್ರೆಡಿಟ್ ಆಗಿಲ್ಲ ಎಂಬುದಾಗಿ ತಿಳಿದು ಬಂದಿದ್ದು ಅದರ ಬಗ್ಗೆ ಕೂಡ ಚಿಂತಾ ಕ್ರಾಂತರಾಗಿದ್ದಾರೆ. ಜೂನ್ ತಿಂಗಳಿನ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುತ್ತದೆ ಎಂಬುದನ್ನ ನೋಡುವುದಾದರೆ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಮೊದಲ ವಾರ ಅಥವಾ 20ನೇ ದಿನಾಂಕದ ಒಳಗಾಗಿ ಮಹಿಳೆಯರ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುವಂತಹ ಪ್ರಕ್ರಿಯೆಯನ್ನು ಸರ್ಕಾರ ಪೂರೈಸಲಿದೆ ಎಂಬುದಾಗಿ ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಒಂದು ವೇಳೆ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಾರದೆ ಹೋದಲ್ಲಿ ಕೆಲವೊಂದು ಅಪ್ಡೇಟ್ಗಳನ್ನು ನೀವು ಮಾಡಿಲ್ಲ ಎಂಬುದಾಗಿ ಅರ್ಥ ಆಗಿರುತ್ತದೆ ಉದಾಹರಣೆಗೆ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಅಥವಾ ರೇಷನ್ ಕಾರ್ಡ್ ಗೆ ಆಧಾರ್ ಅನ್ನು ಲಿಂಕ್ ಮಾಡುವುದು (KYC) ಬ್ಯಾಂಕ್ ಅಕೌಂಟ್ ಗೆ ಲಿಂಕ್ ಮಾಡುವುದು ಸೇರಿದಂತೆ ಕೆಲವೊಂದು ಪ್ರಮುಖ ಅಪ್ಡೇಟ್ಗಳನ್ನು ನೀವು ಈ ಸಂದರ್ಭದಲ್ಲಿ ಮಾಡಬೇಕಾಗಿರುವುದು ಅತ್ಯಂತ ಅಗತ್ಯವಾಗಿರುತ್ತದೆ ಇಲ್ಲವಾದಲ್ಲಿ ಹಣ ಸಿಗುವುದು ಅನುಮಾನವೇ ಸರಿ ಅಂತ ಹೇಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಒಂದು ವೇಳೆ ನೀವು ಹೊಸದಾಗಿ ಅರ್ಜಿ ಸಲ್ಲಿಸಿದರೆ ಒಟ್ಟಾರೆ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗುವುದರಲ್ಲಿ ಕೂಡ ಯಾವುದೇ ಅನುಮಾನವಿಲ್ಲ.

ಲೋಕಸಭಾ ಚುನಾವಣೆಯ ಫಲಿತಾಂಶ ಪರಿಣಾಮ ಬೀರುತ್ತಾ?

ಕಾಂಗ್ರೆಸ್ ಸರ್ಕಾರ ಹೇಳಿರುವ ಪ್ರಕಾರ ಲೋಕಸಭಾ ಚುನಾವಣೆ ಗೆದ್ರು ಕೂಡ ಈ ಯೋಜನೆಯ ಜೊತೆಗೆ ಬಡ ಮಹಿಳೆಯರಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುವಂತಹ ಯೋಜನೆಯನ್ನು ಕೂಡ ಜೊತೆಯಾಗಿ ನೀಡುತ್ತೇವೆ ಎಂಬುದಾಗಿ ಹೇಳಿಕೊಂಡಿದೆ. ಆಶಾ ಕಾರ್ಯಕರ್ತರ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಂಬಳವನ್ನು ಕೂಡ ಹೆಚ್ಚಿಸುವಂತಹ ನಿರ್ಧಾರವನ್ನು ಕಾರ್ಯರೂಪಕ್ಕೆ ತರುವಂತಹ ಕೆಲಸವನ್ನು ಮಾಡಲಿದ್ದೇವೆ ಎಂಬುದಾಗಿ ಹೇಳಿಕೊಂಡಿದೆ. ಒಟ್ಟಾರೆಯಾಗಿ ಲೋಕಸಭಾ ಚುನಾವಣೆಯ ನಂತರವೂ ಕೂಡ ಇರುವಂತಹ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನೂ ಲೋಕಸಭಾ ಚುನಾವಣೆಯ ಮ್ಯಾನಿಫೆಸ್ಟ್ ನಲ್ಲಿ ಹೇಳಿಕೊಂಡಿರುವಂತಹ ಯೋಜನೆಗಳನ್ನು ಕೂಡ ಜಾರಿಗೆ ತರುವಂತಹ ವಿಚಾರದ ಬಗ್ಗೆ ಸರ್ಕಾರ ಪ್ರಬಲವಾಗಿ ತನ್ನನ್ನು ತಾನು ಸಮರ್ಥಿಸಿಕೊಂಡಿದೆ ಎಂಬುದಾಗಿ ಹೇಳಿಕೊಂಡಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಬರುವುದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು ಯಾವ ಫಲಿತಾಂಶ ಬರಲಿದೆ ಹಾಗೂ ಏನೆಲ್ಲಾ ಬದಲಾವಣೆಗಳು ನಡೆಯಬಹುದು ಎಂಬುದನ್ನು ಕಾದು ನೋಡಬೇಕಾಗಿದೆ.

Comments are closed.