Scholarships: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ಹತ್ತು ಸಾವಿರ ಸ್ಕಾಲರ್ಶಿಪ್; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಗೊತ್ತಾ?

Scholarships: ಸರ್ಕಾರ ಅತ್ಯಂತ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದಿರುವಂತಹ ವರ್ಗದ ವಿದ್ಯಾರ್ಥಿಗಳಿಗೆ ಆಗಾಗ ಸ್ಕಾಲರ್ ಶಿಪ್ ವಿದ್ಯಾರ್ಥಿ ವೇತನದ ಮೂಲಕ ಅವರ ಪ್ರತಿಭೆಗೆ ತಕ್ಕಂತೆ ಪುರಸ್ಕಾರವನ್ನು ಮಾಡುತ್ತ ಹಾಗು ಆರ್ಥಿಕವಾಗಿ ಹಿಂದುಳಿದಿರುವಂತಹ ವಿದ್ಯಾರ್ಥಿಗಳಿಗೆ ಅವರು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಬೇಕಾಗಿರುವಂತಹ ಆರ್ಥಿಕ ಸಹಾಯವನ್ನು ಮಾಡಿಕೊಂಡು ಬರುತ್ತಿದೆ ಎಂದು ಹೇಳಬಹುದಾಗಿದೆ. ಇನ್ನು ಇವತ್ತಿನ ಈ ಲೇಖನದ ಮೂಲಕ ನಾವು ನಿಮಗೆ ಹೇಳುವುದಕ್ಕೆ ಹೊರಟಿರೋದು ಕ್ರೀಡಾ ವಿದ್ಯಾರ್ಥಿ ವೇತನದ ಬಗ್ಗೆ. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕ್ರೀಡಾಪಟುಗಳು ಕೂಡ ಆಗಿರುವಂತಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 10 ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ನೀಡುವಂತಹ ಕೆಲಸವನ್ನು ಹೊಸ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಮಾಡಲಾಗುತ್ತಿದ್ದು ಇದರಲ್ಲಿ ನೀವು ಕೂಡ ಅರ್ಹರಾಗಿದ್ದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವಂತಹ ಆಕಾಂಕ್ಷೆ ಇದ್ರೆ ಅರ್ಜಿ ಸಲ್ಲಿಸಬಹುದಾಗಿದ್ದು ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳೋಣ.

ಕ್ರೀಡಾಪಟು ವಿದ್ಯಾರ್ಥಿಗಳಿಗೆ ವಾರ್ಷಿಕ ಹತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ!

ಕ್ರೀಡಾಪಟುಗಳಿಗೆ ಕೊಡ ಮಾಡುವಂತಹ 2023 ಹಾಗೂ 24ನೇ ಸಾಲಿನ ವಿದ್ಯಾರ್ಥಿ ವೇತನದ ಅಡಿಯಲ್ಲಿ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಈ ಯೋಜನೆ ಅಡಿಯಲ್ಲಿ ಹತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನದ ಪೂರೈಕೆ ಏನು ಮಾಡಲಾಗುತ್ತಿದ್ದು ಈ ತರಗತಿಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿದ್ದಾರೆ ಎಂದು ಹೇಳಬಹುದಾಗಿದೆ. ಇನ್ನು ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದಕ್ಕೆ ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳನ್ನು ಪೂರೈಸ ಬೇಕಾಗಿರುವುದು ಕೂಡ ಅತ್ಯಂತ ಅಗತ್ಯವಾಗಿದ್ದು ಆ ನಿಯಮಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ.

ಅರ್ಜಿ ಸಲ್ಲಿಸುವುದಕ್ಕೆ ಈ ಅರ್ಹತೆಗಳನ್ನು ಪೂರೈಸಬೇಕು!

  • 2023 ಹಾಗೂ 24ನೇ ಸಾಲಿನಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿ ಆರರಿಂದ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
  • ಹೇಲೋ ಇಂಡಿಯಾದಲ್ಲಿ ರಾಜ್ಯದ ತಂಡವನ್ನು ಪ್ರತಿನಿಧಿಸುವಂತಹ ವಿದ್ಯಾರ್ಥಿಗಳು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
  • ಅಥವಾ ಯಾವುದೇ ರೀತಿಯ ರಾಷ್ಟ್ರೀಯ ಕ್ರೀಡಾಪಟುಗಳಲ್ಲಿ ಕೂಡ ರಾಜ್ಯವನ್ನು ಪ್ರತಿನಿಧಿಸಿರುವಂತಹ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನದ ಯೋಜನೆ ಅಡಿಯಲ್ಲಿ ಹಣವನ್ನು ಪಡೆದುಕೊಳ್ಳುವಂತಹ ಅವಕಾಶ ಇದೆ.
  • ಈ ಮೇಲೆ ಇರುವಂತಹ ಶರತುಗಳಲ್ಲಿ 6 ರಿಂದ 10 ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಕಾಣಿಸಿಕೊಂಡಿದ್ದರೆ ಅವರು ಈ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ವಾರ್ಷಿಕವಾಗಿ ಹತ್ತು ಸಾವಿರ ರೂಪಾಯಿ ಹಣವನ್ನು ಪಡೆದುಕೊಳ್ಳುವುದಕ್ಕೆ ಅರ್ಹರಾಗಿದ್ದಾರೆ.

sevasindhuservices.kar.gov.in ಇದು ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ಅಧಿಕೃತ ವೆಬ್ಸೈಟ್ ಆಗಿದ್ದು ಇಲ್ಲಿ ಹೋಗಿ ನೀವು ನಿಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇನ್ನು 2023 ಹಾಗೂ 24ನೇ ಸಾಲಿನ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು ಅದರ ಒಳಗೆ ಅರ್ಜಿ ಸಲ್ಲಿಸುವುದನ್ನ ಮಾಡಬೇಕಾಗಿರುತ್ತದೆ.

Comments are closed.