Karnataka Politics: ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಹೆಸರು ಫೈನಲ್; ಬಹುಮತ ಪಡೆದ ಅಭರ್ಥಿ ಯಾರು ಗೊತ್ತಾ?

Karnataka Politics: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ  ಸೋಲಿನಿಂದ ಬಿಜೆಪಿ ಹೈಕಮಾಂಡ್ ರಾಜ್ಯ ಘಟಕವನ್ನು ಕಡೆಗಣಿಸಿದಂತೆ ಭಾಸವಾಗುತ್ತದೆ. ಈ ಬಾರಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ರಾಜ್ಯ ಬಿಜೆಪಿ ಮುಖಂಡರ ವೈಫಲ್ಯ ಹಾಗೂ ಕಾಂಗ್ರೆಸ್ ಕುತಂತ್ರಗಳನ್ನು ಎದುರಿಸುವಲ್ಲಿ ಬಿಜೆಪಿ ಸೋಲಬೇಕಾಯಿತು. ಇಷ್ಟೇ ಅಲ್ಲದೆ ಇನ್ನು ಹಲವು ಕಾರಣಗಳಿಂದ ರಾಜ್ಯದಲ್ಲಿ ಅಧಿಕಾರ ಗದ್ದುಗೆ ಕಳೆದುಕೊಳ್ಳಬೇಕಾಯಿತು. ಇದನ್ನೂ ಓದಿ: BiggBossKannada10: ಬಿಗ್ ಬಾಸ್ ಮನೆಯಲ್ಲಿರುವ ಈ ಸ್ಪರ್ಧಿಗಳ ವಯಸ್ಸು ಎಷ್ಟು ಗೊತ್ತಾ? ನೋಡಿದ್ರೆ ಹಾಗೆ ಅನ್ನಿಸೋದೇ ಇಲ್ಲ ಬಿಡಿ!

ಈ ಚುನಾವಣೆಯಲ್ಲಿ ಸೋತ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲು ಅವರು ಸೋಲಿನ ಜವಾಬ್ದಾರಿ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆದರೆ ಇದನ್ನು ಹೈಕಮಾಂಡ್ ಸ್ವೀಕರಿಸಿರಲಿಲ್ಲ. ಅಲ್ಲದೆ ವಿಧಾನ ಸಭೆಯಲ್ಲಿಯೂ ಇನ್ನು ವಿಪಕ್ಷ ನಾಯಕನ ಆಯ್ಕೆ ಆಗದಿರುವುದು ಜನರಲ್ಲಿಯೂ ಒಂದಿಷ್ಟು ಗೊಂದಲಗಳಿಗೆ ಕಾರಣವಾಗಿದೆ. ಈ ಎಲ್ಲ ಗೊಂದಲಗಳಿಗೆ ಫುಲ್  ಸ್ಟಾಪ್ ಇಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದಂತೆ ಕಾಣುತ್ತಿದೆ.

ಸದ್ಯ ಇರುವ ಮಾಹಿತಿ ಪ್ರಕಾರ ಇನ್ನು ಎರಡು ಮೂರು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಕೇಂದ್ರ ಸಚಿವೆ, ಶೋಭಾ ಕರಂದ್ಲಾಜೆ ಅವರನ್ನು ಬಹುತೇಕ ಅಂತಿಮ ಗೊಳಿಸಲಾಗಿದೆ ಎನ್ನಲಾಗಿದೆ.

ಶೋಭಾ ಕರಂದ್ಲಾಜೆ ಅವರು ಸದ್ಯ ಕೇಂದ್ರ ಸಚಿವರಾಗಿದ್ದು, ರಾಜ್ಯದಲ್ಲಿಯೂ ಸಚಿವರಾಗಿ, ಶಾಸಕರಾಗಿ ಅನುಭವ ಹೊಂದಿದ್ದಾರೆ. ಜೊತೆಗೆ ಪ್ರಖರ ಹಿಂದೂತ್ವ ವಾದಿಯಾಗಿದ್ದಾರೆ. ಇವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು, ಒಕ್ಕಲಿಗರ ಮತವನ್ನು ಸೆಳೆಯುವ ಸಲುವಾಗಿ ಬಿಜೆಪಿ ಹೈಕಮಾಂಡ್ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ. ಇದನ್ನೂ ಓದಿ: Second hand bike market: ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿ ಮಾಡಬೇಕೆ? ಅತ್ಯಂತ ಕಡಿಮೆ ಬೆಲೆಗೆ, ಅದೂ ಉತ್ತಮ ಕಂಡೀಶನ್ ಬೈಕ್! ಎಲ್ಲಿ ಸಿಗುತ್ತೆ ಗೊತ್ತಾ?

ಅಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಸಮರ್ಥವಾಗಿ ಎದುರಿಸುವ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನದಟ್ಟು ಮಾಡಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸುವಂತವರನ್ನು ಹೈಕಮಾಂಡ್ ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಲಿದೆ. ಇ ಎಲ್ಲ ಗುಣಗಳು ಶೋಭಾ ಕರಂದ್ಲಾಜೆ ಅವರಿಗೆ ಇರುವುದರಿಂದ ಬಹುತೇಕ ನಾಳೆ ಅವರ ಹೆಸರು ಘೋಷಣೆ ಆಗುವ ಸಾಧ್ಯತೆಗಳಿವೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ, ಶಾಸಕ, ಬಿ.ವೈ. ವಿಜಯೇಂದ್ರ, ಶಾಸಕ ಯತ್ನಾಳ್, ಶಾಸಕ ಸಿ.ಟಿ.ರವಿ ಅವರ ಹೆಸರುಗಳು ಪ್ರಭಲವಾಗಿ ಕೇಳಿಬಂದಿದ್ದವು. ಹಾಗಾಗಿ ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮನೆ ಮಾಡಿದೆ.

BJPCongress partyKannada Trending Newskarnataka governmentKarnataka PoliticsLive News Kannadapolitical leaderPolitical newswho will be president of bjp karnataka