PM Vishwakarma: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಕೇಂದ್ರದಿಂದ 15,000 ರೂ. ನೇರವಾಗಿ ಖಾತೆಗೆ ಜಮಾ!

PM Vishwakarma: ಪ್ರತಿ ಬಾರಿ ಕೇಂದ್ರ ಸರ್ಕಾರ ತನ್ನ ಬಜೆಟ್ ಬಿಡುಗಡೆ ಮಾಡುವಾಗ ಅಥವಾ ವಿಶೇಷ ಸಂದರ್ಭ ಗಳಲ್ಲಿ ಹೆಚ್ಚಾಗಿ ಮಹಿಳೆಯರಿಗೆ ಸಮಾಜದಲ್ಲಿ ಸಬಲರನ್ನಾಗಿ ಮಾಡುವಂತಹ ಯೋಜನೆಗಳನ್ನು ಜಾರಿಗೆ ತರುತ್ತದೆ. ಮಹಿಳೆಯರನ್ನು ಪುರುಷರಿಗೆ ಸರಿ ಸಮಾನವಾಗಿ ಸಮಾಜದಲ್ಲಿ ಬೆಳೆಯುವ ರೀತಿಯಲ್ಲಿ ಮಾಡಬೇಕು ಎನ್ನುವ ಕಾರಣಕ್ಕಾಗಿ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದೇ ರೀತಿ ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲುವ ಬೆಂಬಲವನ್ನ ನೀಡುವ ರೀತಿಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು, ಬನ್ನಿ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ!

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಕೇಂದ್ರ ಸರ್ಕಾರ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಗಳನ್ನು ಅಭಿವೃದ್ಧಿಗೊಳಿಸುವಂತಹ ಯೋಜನೆಗೆ ಮುಂದಾಗಿದೆ. ಈ ವಿಭಾಗದಲ್ಲಿ ಇರುವಂತಹ ಕುಶಲಕರ್ಮಿಗಳಿಗೆ ಸರಿಯಾದ ರೀತಿಯಲ್ಲಿ ತರಬೇತಿ ನೀಡಿ ಜಾಹೀರಾತು ಹಾಗೂ ಡಿಜಿಟಲ್ ಮಾರ್ಗದ ಮೂಲಕ ಯಾವ ರೀತಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದು ಎನ್ನುವುದರ ಬಗ್ಗೆ ಈ ಯೋಜನೆಯ ಮೂಲಕ ತಿಳಿಸಿಕೊಡಲಾಗುತ್ತದೆ.

ಈ ರೀತಿಯ ಯೋಜನೆಯಲ್ಲಿ ತರಬೇತಿಗೆ ಬರುವವರಿಗೆ ಟೂಲ್ ಕಿಟ್ ಅನ್ನು ನೀಡುವುದರ ಜೊತೆಗೆ 500 ರೂಪಾಯಿಗಳ ರೀತಿಯಲ್ಲಿ ಹದಿನೈದು ಸಾವಿರ ರೂಪಾಯಿಗಳ ಸಹಾಯಧನವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯವನ್ನು ಕೂಡ ಈ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ. ಹಣವನ್ನು ತರಬೇತಿಗೆ ಬಂದಿರುವಂತಹ ಕುಶಲಕರ್ಮಿಗಳ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರ ವರ್ಗಾವಣೆ ಮಾಡುತ್ತದೆ.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಿಗುವಂತಹ ಸಾಲ.

16 ರೀತಿಯ ಕುಶಲಕರ್ಮಿಗಳನ್ನು ಈ ಯೋಜನೆ ಅಡಿಯಲ್ಲಿ ಗುರುತಿಸಲಾಗುತ್ತದೆ ಹಾಗೂ ಅವರಿಗೆ ಅವರ ತರಬೇತಿಗೆ ಬೇಕಾಗಿರುವಂತಹ ಉಪಕರಣಗಳನ್ನು ಕೂಡ ಸರ್ಕಾರವೇ ಒದಗಿಸುತ್ತದೆ. ಕುಶಲಕರ್ಮಿಗಳಿಗೆ ಯಾವುದೇ ಗ್ಯಾರೆಂಟಿ ಇಲ್ಲದೆ ಬೇಕಾಗಿರುವಂತಹ ಸಾಲಗಳ ಪೈಕಿಯಲ್ಲಿ 3 ಲಕ್ಷ ರೂಪಾಯಿಗಳ ವರೆಗೆ ಯಾವುದೇ ಗ್ಯಾರೆಂಟಿ ಇಲ್ಲದೆ ಸಾಲವನ್ನು ನೀಡಲಾಗುತ್ತದೆ. ಪ್ರಮುಖವಾಗಿ ಮಹಿಳೆಯರಿಗೆ ಈ ಯೋಜನೆ ಸಾಕಷ್ಟು ಲಾಭದಾಯಕವಾಗಿರಲಿದೆ ಹಾಗೂ ಪ್ರತಿಯೊಂದು ಮನೆಯಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯನ್ನು ಬಳಸಿಕೊಳ್ಳಲು ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ.

ಟೂಲ್ ಕಿಟ್ ಪಡೆದುಕೊಳ್ಳಲು ಬೇಕಾಗಿರುವ ಡಾಕ್ಯುಮೆಂಟ್ಸ್ ಗಳು ಹಾಗೂ ಅರ್ಜಿ ಸಲ್ಲಿಕೆ ವಿಧಾನ.

  • ಇನ್ಕಮ್ ಸರ್ಟಿಫಿಕೇಟ್ ಜೊತೆಗೆ ಆಧಾರ್ ಕಾರ್ಡ್ ಬೇಕಾಗಿರುತ್ತದೆ.
  • ಪ್ರಮುಖವಾಗಿ ರೇಷನ್ ಕಾರ್ಡ್ ಹೊಂದಿರಬೇಕಾಗಿದೆ.
  • ಅಡ್ರೆಸ್ ಪ್ರೂಫ್ ಜೊತೆಗೆ ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಡೀಟೇಲ್ಸ್ ಅನ್ನು ಒದಗಿಸ ಬೇಕಾಗಿರುತ್ತದೆ.

https://pmvishwakarma.gov.in ಇದು ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ ಆಗಿದ್ದು ಇಲ್ಲಿ ಹೋಗುವ ಮೂಲಕ ನೀವು ಈ ವಿಶೇಷವಾದ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

PM Vishwakarma