Fixed Deposit: 50,000 ಫಿಕ್ಸ್ಡ್ ಡೆಪಾಸಿಟ್ ಮೇಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವರ್ಷಕ್ಕೆ ಎಷ್ಟು ಬಡ್ಡಿ ಸಿಗುತ್ತೆ?

Fixed Deposit: ರಾಷ್ಟ್ರೀಯ ಬ್ಯಾಂಕ್ ನಲ್ಲಿ ತಾವು ದುಡಿದಿರುವಂತಹ ಹಣವನ್ನು ಹೂಡಿಕೆ ಮಾಡುವುದು ಅತ್ಯಂತ ಸುಲಭ ಆಗಿರುತ್ತೆ ಹಾಗೂ ಸುರಕ್ಷಿತವಾಗಿರುತ್ತದೆ. ಅದರಲ್ಲಿ ವಿಶೇಷವಾಗಿ ಹೂಡಿಕೆ ಮಾಡುವ ಸಂದರ್ಭದಲ್ಲಿ ನೀವು ಯಾವ ಯೋಜನೆಯಲ್ಲಿ ಹೂಡಿಕೆ ಮಾಡುತ್ತಿದ್ದೀರಿ ಅನ್ನೋದನ್ನ ಕೂಡ ನೀವು ತಿಳಿದುಕೊಳ್ಳಬೇಕಾಗಿರುವುದು ಪ್ರಮುಖವಾಗಿರುತ್ತದೆ.‌ ಇನ್ನು ಇಂತಹ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮೊದಲನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವುದು ನಮ್ಮ ಸರ್ಕಾರದ ಅತ್ಯಂತ ದೊಡ್ಡ ಗ್ರಾಹಕ ಬಳಗವನ್ನು ಹೊಂದಿರುವಂತಹ ಬ್ಯಾಂಕ್ ಆಗಿರುವಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ.

ಹಾಗಿದ್ರೆ ಬನ್ನಿ ಇವತ್ತಿನ ಈ ಲೇಖನದ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ರೂ. 1 ಲಕ್ಷಗಳ ಹಣವನ್ನು ಹೂಡಿಕೆ ಮಾಡಿದ್ರೆ ಹಾಗೂ 50,000 ಹಣವನ್ನು ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳೋಣ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 50,000 ಹಣ ಹೂಡಿಕೆ ಮಾಡಿದ್ರೆ ಎಷ್ಟು ಸಿಗುತ್ತೆ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಜಾರಿಗೆ ತಂದಿರುವಂತಹ ಫಿಕ್ಸೆಡ್ ಡೆಪಾಸಿಟ್ ಯೋಜನೆ ಅಡಿಯಲ್ಲಿ ನೀವು 1 ಲಕ್ಷ ಹಣವನ್ನು ಹೂಡಿಕೆ ಮಾಡಿದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ವಾರ್ಷಿಕ ಏಳು ಪ್ರತಿಶತ ಬಡ್ಡಿ ದರವನ್ನು ನಿಗದಿಪಡಿಸಿದೆ. ಇನ್ನು ಯಾವ ಅವಧಿಗೆ ಎಷ್ಟು ಹಣವನ್ನು ಹೂಡಿಕೆ ಮಾಡಿದ್ರೆ ಏನು ಸಿಗುತ್ತೆ ಅನ್ನೋದರ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿ ಈ ಕೆಳಗೆ ಇರುವಂತಹ ಲಿಸ್ಟ್ ಮೂಲಕ ಸಿಗಲಿದೆ ಬನ್ನಿ.

  • ಐವತ್ತು ಸಾವಿರ ರೂಪಾಯಿಗಳ ಹೂಡಿಕೆ ಮಾಡಿದರೆ ನಿಮಗೆ ಒಂದು ವರ್ಷಕ್ಕೆ ರಿಟರ್ನ್ಸ್ ಸಂದರ್ಭದಲ್ಲಿ ಒಟ್ಟಾರೆಯಾಗಿ 53593 ರೂಪಾಯಿಗಳ ಮತ್ತ ಸಿಗಲಿದೆ.
  • ಒಂದು ಲಕ್ಷ ಹಣವನ್ನು ಹೂಡಿಕೆ ಮಾಡಿದರೆ ನೀವು 1.07 ಲಕ್ಷ ರೂಪಾಯಿಗಳ ರಿಟರ್ನ್ ಅನ್ನು ಪಡೆದುಕೊಳ್ಳುತ್ತೀರಿ.
  • ಎರಡು ಲಕ್ಷ ರೂಪಾಯಿಗಳ ಹೂಡಿಕೆಯನ್ನು ಒಂದು ವರ್ಷಗಳ ಕಾಲಕ್ಕೆ ನೀವು ಹೂಡಿಕೆ ಮಾಡಿದರೆ 2.14 ಲಕ್ಷ ರೂಪಾಯಿಗಳ ರಿಟರ್ನ್ ಅನ್ನು ಒಟ್ಟಾರೆಯಾಗಿ ಪಡೆದುಕೊಳ್ಳುತ್ತೀರಿ.
  • ಒಂದು ವರ್ಷದಲ್ಲಿ 3 ಲಕ್ಷ ರೂಪಾಯಿ ಹಣವನ್ನು ಫಿಕ್ಸೆಡ್ ಡೆಪಾಸಿಟ್ ಮೇಲೆ ಹೂಡಿಕೆ ಮಾಡಿದರೆ ನೀವು ರಿಟರ್ನ್ ಸಂದರ್ಭದಲ್ಲಿ 3.21 ಲಕ್ಷ ರೂಪಾಯಿಗಳ ರಿಟರ್ನ್ ಅನ್ನು ಪಡೆದುಕೊಳ್ಳಬಹುದಾಗಿದೆ.
  • ಒಂದು ವರ್ಷಕ್ಕೆ ನಾಲ್ಕು ಲಕ್ಷ ರೂಪಾಯಿಗಳ ಹೂಡಿಕೆಯನ್ನು ಮಾಡಿದ್ರೆ ನೀವು ರಿಟರ್ನ್ಸ್ ಸಂದರ್ಭದಲ್ಲಿ 4.18 ಲಕ್ಷರೂಪಾಯಿಗಳ ರಿಟರ್ನ್ ಪಡೆದುಕೊಳ್ಳಲಿದ್ದೀರಿ.
  • ಒಂದು ವರ್ಷಕ್ಕೆ 5 ಲಕ್ಷ ರೂಪಾಯಿಗಳ ಹೂಡಿಕೆ ಮೇಲೆ ನೀವು 5.35 ಲಕ್ಷ ರೂಪಾಯಿಗಳ ಒಟ್ಟಾರೆ ರಿಟರ್ನ್ ಅನ್ನು ಪಡೆದುಕೊಳ್ಳಲಿದ್ದೀರಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹಣವನ್ನು ಫಿಕ್ಸಿಡ್ ಡೆಪಾಸಿಟ್ ಮೇಲೆ ಹೂಡಿಕೆ ಮಾಡಿದರೆ ನೀವು ಈ ರೀತಿಯ ರಿಟರ್ನ್ ಅನ್ನು ಪಡೆದುಕೊಳ್ಳುತ್ತೀರಿ.

Comments are closed.